ವಯಕ್ತಿಕ ಮಾಹಿತಿ | ||||||||||||||||||||||||||||||||||||||||||||||||||||||||||||||||||
---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|---|
ಪೂರ್ಣ ಹೆಸರು | ಜಸ್ಪ್ರೀತ್ ಜಸ್ಬೀರ್ ಸಿಂಘ್ ಬುಮ್ರಾ | |||||||||||||||||||||||||||||||||||||||||||||||||||||||||||||||||
ಹುಟ್ಟು | ಅಹ್ಮದಾಬಾದ್, ಗುಜರಾತ್, India | ೬ ಡಿಸೆಂಬರ್ ೧೯೯೩|||||||||||||||||||||||||||||||||||||||||||||||||||||||||||||||||
ಎತ್ತರ | 178 cm (5 ft 10 in) | |||||||||||||||||||||||||||||||||||||||||||||||||||||||||||||||||
ಬ್ಯಾಟಿಂಗ್ | ಬಲಗೈ | |||||||||||||||||||||||||||||||||||||||||||||||||||||||||||||||||
ಬೌಲಿಂಗ್ | ಬಲಗೈ ಮಧ್ಯಮ ವೇಗಿ [೧] | |||||||||||||||||||||||||||||||||||||||||||||||||||||||||||||||||
ಪಾತ್ರ | Bowler | |||||||||||||||||||||||||||||||||||||||||||||||||||||||||||||||||
ಅಂತಾರಾಷ್ಟ್ರೀಯ ಮಾಹಿತಿ | ||||||||||||||||||||||||||||||||||||||||||||||||||||||||||||||||||
ರಾಷ್ಟೀಯ ತಂಡ | ||||||||||||||||||||||||||||||||||||||||||||||||||||||||||||||||||
ಟೆಸ್ಟ್ ಚೊಚ್ಚಲ (ಕ್ಯಾಪ್ ೨೯೦) | ೫ ಜನವರಿ ೨೦೧೮ v ದಕ್ಷಿಣ ಆಫ್ರಿಕಾ | |||||||||||||||||||||||||||||||||||||||||||||||||||||||||||||||||
ಕೊನೆಯ ಟೆಸ್ಟ್ | ೩೦ ಆಗಸ್ಟ್ ೨೦೧೮ v ಇಂಗ್ಲೆಂಡ್ | |||||||||||||||||||||||||||||||||||||||||||||||||||||||||||||||||
ಅಂ. ಏಕದಿನ ಚೊಚ್ಚಲ (ಕ್ಯಾಪ್ ೨೧೦) | ೨೩ ಜನವರಿ ೨೦೧೬ v ಆಸ್ಟ್ರೇಲಿಯಾ | |||||||||||||||||||||||||||||||||||||||||||||||||||||||||||||||||
ಕೊನೆಯ ಅಂ. ಏಕದಿನ | ೧೬ ಫೆಬ್ರವರಿ ೨೦೧೮ v ದಕ್ಷಿಣ ಆಫ್ರಿಕಾ | |||||||||||||||||||||||||||||||||||||||||||||||||||||||||||||||||
ಅಂ. ಏಕದಿನ ಅಂಗಿ ನಂ. | ೯೩ | |||||||||||||||||||||||||||||||||||||||||||||||||||||||||||||||||
ಟಿ೨೦ಐ ಚೊಚ್ಚಲ (ಕ್ಯಾಪ್ ೫೭) | ೨೬ ಜನವರಿ ೨೦೧೬ v ಆಸ್ಟ್ರೇಲಿಯಾ | |||||||||||||||||||||||||||||||||||||||||||||||||||||||||||||||||
ಕೊನೆಯ ಟಿ೨೦ಐ | ೨೭ ಜೂನ್ ೨೦೧೮ v ಐರ್ಲೆಂಡ್ | |||||||||||||||||||||||||||||||||||||||||||||||||||||||||||||||||
ಟಿ೨೦ಐ ಅಂಗಿ ನಂ. | ೯೩ | |||||||||||||||||||||||||||||||||||||||||||||||||||||||||||||||||
ದೇಶೀಯ ತಂಡದ ಮಾಹಿತಿ | ||||||||||||||||||||||||||||||||||||||||||||||||||||||||||||||||||
ವರ್ಷಗಳು | ತಂಡ | |||||||||||||||||||||||||||||||||||||||||||||||||||||||||||||||||
೨೦೧೬ರಿಂದ | ಗುಜರಾತ್ | |||||||||||||||||||||||||||||||||||||||||||||||||||||||||||||||||
೨೦೧೩ರಿಂದ | ಮುಂಬೈ ಇಂಡಿಯನ್ಸ್ (squad no. ೯೩) | |||||||||||||||||||||||||||||||||||||||||||||||||||||||||||||||||
ವೃತ್ತಿ ಅಂಕಿಅಂಶಗಳು | ||||||||||||||||||||||||||||||||||||||||||||||||||||||||||||||||||
| ||||||||||||||||||||||||||||||||||||||||||||||||||||||||||||||||||
ಮೂಲ: ESPNcricinfo, ೩ ಸೆಪ್ಟೆಂಬರ್ ೨೦೨೨ |
ಜಸ್ಪ್ರೀತ್ ಜಸ್ಬೀರ್ ಸಿಂಘ್ ಬುಮ್ರಾ, ಓರ್ವ ಭಾರತೀಯ ಕ್ರಿಕೆಟ್ ಆಟಗಾರ. ಇವರು ಬಲಗೈ ವೇಗಿ. ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಡುತ್ತಾರೆ.
ಬುಮ್ರಾ ರವರು ಡಿಸೆಂಬರ್ ೦೬,೧೯೯೩ರಂದು ಅಹೆಮ್ದಬಾದ್, ಗುಜರಾತ್ನಲ್ಲಿ ಜನಿಸಿದರು. ಗುಜರಾತ್ ನ ೧೯ರ ವಯ್ಯೋಮಿತಿ ಕ್ರಿಕೆಟ್ ತಂಡಕ್ಕೆ ಆಡಲು ಆರಂಭಿಸಿದರು. ನಂತರ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಸ್ಥಾನ ಪಡೆದರು.[೨]
ಏಪ್ರಿಲ್ ೦೪, ೨೦೧೩ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರಲ್ಲಿರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದಿಂದ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಪಾದಾರ್ಪಣೆ ಮಾಡಿದರು.ಇಂಡಿಯನ್ ಪ್ರೀಮಿಯರ್ ಲೀಗ್ ನ ತಮ್ಮ ಚೊಚ್ಚಲ ಪಂದ್ಯದಲ್ಲಿ ಮೂರು ವಿಕೆಟ್ ಪಡೆದು ೩೨ ರನ್ ನೀಡಿದರು.ಇಲ್ಲಿಯವರೆಗೆ ಐಪಿಎಲ್ ನಲ್ಲಿ ೪೬ ವಿಕೆಟ್ ಗಳನ್ನ ಪಡೆದಿದ್ದಾರೆ. ಪ್ರಸ್ತುತ ಇವರು ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಡುತ್ತಾರೆ.[೩][೪][೫]
ಜನವರಿ ೨೩, ೨೦೧೬ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಐದನೇ ಹಾಗು ಕೊನೆಯ ಏಕದಿನ ಪಂದ್ಯದ ಮೂಲಕ ಇವರು ಅಂತರರಾಷ್ಟ್ರೀಯ ಕ್ರಿಕೆಟ್ ಜಗತ್ತಿಗೆ ಪಾದಾರ್ಪನೆ ಮಾಡಿದರು. ಈ ಪಂದ್ಯದಲ್ಲಿ ತಮ್ಮ ೧೦ ಓವರ್ ಗಳಲ್ಲಿ ಕೇವಲ ೪೦ರನ್ ನೀಡಿ ಆಸ್ಟ್ರೇಲಿಯಾದ ನಾಯಕ ಸ್ಟೀವನ್ ಸ್ಮಿತ್ ಹಾಗು ಆಲರೌಂಡರ್ ಜೇಮ್ಸ್ ಫಲ್ಕನರ್ ರವರ ವಿಕೆಟ್ ಪಡೆದರು. ಜನವರಿ ೨೬, ೨೦೧೬ರಂದು ಅಡಿಲೇಡ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟಿ-೨೦ ಪಂದ್ಯದ ಮುಖಾಂತರ ಅಂತರರಾಷ್ಟ್ರೀಯ ಕ್ರಿಕೆಟ್ ಜಗತ್ತಿಗೆ ಪಾದಾರ್ಪಣೆ ಮಾಡಿದರು. ತಮ್ಮ ಮೊದಲ ಟಿ-೨೦ ಪಂದ್ಯದಲ್ಲಿ ಕೇವಲ ೨೩ ರನ್ ನೀಡಿ ೩ ವಿಕೆಟ್ ಪಡೆದರು.[೬][೭]