ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ಹೇಮಾವತಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೫೮ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಸಿಂಹಾರವಮ್ಅಥವಾ ದೇಸಿ ಸಿಂಹಾರವಮ್ ಎಂದು ಹೆಸರಿಸಿದ್ದಾರೆ.[೧][೨] ಇದು ನಾಗಸ್ವರ ವಾದನಕ್ಕೆ ಅತ್ಯಂತ ಅನುಕೂಲವಾದ ರಾಗ.
ಇದು ಹತ್ತನೆಯ ದಿಸಿ ಚಕ್ರದ ನಾಲ್ಕನೆಯ ರಾಗ.ಇದರ ನೆನೆಪಿನ ಹೆಸರು ದಿಸಿ-ಭೂ ನೆನಪಿನ ನುಡಿಕಟ್ಟು:ಸ ರಿ ಗಿ ಮಿ ಪ ಧಿ ನಿ [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.
ಆರೋಹಣ ಸ ರಿ೨ ಗ೨ ಮ೨ ಪ ದ೨ ನಿ೨ ಸ
ಅವರೋಹಣ ಸ ನಿ೨ ದ೨ ಪ ಮ೨ ಗ೨ ರಿ೨ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಚತುಶ್ರುತಿ ರಿಷಭ,ಸಾಧಾರಣ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಕಾಕಲಿ ನಿಷಾಧ.ಇದು ೨೨ನೆಯ ಮೇಳಕರ್ತ ರಾಗವಾದ ಖರಹರಪ್ರಿಯ
ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.
ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.
ಗ್ರಹಭೇದಮ್ ಸೂತ್ರವನ್ನು ಹೇಮಾವತಿ ರಾಗಕ್ಕೆ ಅನ್ವಯಿಸಿದಾಗ ಮೂರು ರಾಗಗಳು ದೊರೆಯುತ್ತದೆ.ಅವುಗಳು ಕೀರ್ವಾಣಿ,ಕೋಸಲ ಮತ್ತು ವಕುಲಾಭರಣ