ಕೆ. ಎಸ್. ನರಸಿಂಹಸ್ವಾಮಿ | |
---|---|
![]() | |
ಜನನ | ಕಿಕ್ಕೇರಿ, ಮಂಡ್ಯ ಜಿಲ್ಲೆ, ಮೈಸೂರು ಸಾಮ್ರಾಜ್ಯ, ಬ್ರಿಟಿಷ್ ಭಾರತ | ೨೬ ಜನವರಿ ೧೯೧೫
ಮರಣ | 27 December 2003 ಬೆಂಗಳೂರು, ಭಾರತ | (aged 88)
ವೃತ್ತಿ | ಕವಿ |
ರಾಷ್ಟ್ರೀಯತೆ | ಭಾರತೀಯ |
ಕಾಲ | ನವೋದಯ, ರೊಮ್ಯಾಂಟಿಕ್ ಚಳುವಳಿ |
ಪ್ರಭಾವಗಳು
|
ಕೆ. ಎಸ್. ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆಯ ಕರ್ತೃ.[೧](ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ. ಇದು ಮನೆ ಮನೆಯ ಮಾತಾಗಿ, ಕಾವ್ಯವಾಗಿ, ಹಾಡಾಗಿ ಹರಿದಿದೆ. ಇದುವರೆವಿಗೂ ಇಪ್ಪತ್ತೈದಕ್ಕೂ ಹೆಚ್ಚು ಬಾರಿ ಮುದ್ರಣ ಭಾಗ್ಯ ಪಡೆದಿದೆ. ಕನ್ನಡದ ಕೆಲವೇ ಕೃತಿಗಳಿಗೆ ಇಂಥ ಮರು ಮುದ್ರಣದ ಭಾಗ್ಯ- ಆಧುನಿಕ ಕನ್ನಡ ಕಾವ್ಯ ಹಲವು ರೂಪಗಳನ್ನು ಪಡೆಯುತ್ತಾ ಬಂದಿದೆ. ಹಲವು ಸಾಹಿತ್ಯ ಚಳುವಳಿಗಳು ಬಂದುಹೋಗಿವೆ. ಕೆಎಸ್‌ನ ಎಲ್ಲ ಕಾಲಕ್ಕೂ ಸಲ್ಲುವ ಜನಪ್ರೀತಿಯ ಕಾವ್ಯ ಕೃಷಿಗೆ ದೊಡ್ಡ ಹೆಸರು. ಕವಿ ವಿಮರ್ಶಕ ಡಾ. ಎಚ್. ಎಸ್. ವೆಂಕಟೇಶಮೂರ್ತಿ ಅವರು ಕೆಎಸ್‌ನ ಬಗ್ಗೆ ಬರೆಯುತ್ತ ``ನವೋದಯದ ಕಾವ್ಯ ಸಂದರ್ಭದಲ್ಲಿ ಹೆಸರು ಮಾಡಿದ್ದ ಈ ಕವಿ ತಮ್ಮ ಸುಕುಮಾರ ಜಗತ್ತಿನಿಂದ, ನಿಷ್ಠುರವಾದ ಬದುಕಿನ ಸಂದರ್ಭಕ್ಕೆ ಹೊರಳಿದ್ದು `ಶಿಲಾಲತೆ'ಯಲ್ಲಿ. ಆದ್ದರಿಂದ ಸಂಗ್ರಹಕ್ಕೆ ಒಂದು ಐತಿಹಾಸಿಕ ಮಹತ್ವವಿದೆ" -ಎಂದು ದಾಖಲಿಸಿದ್ದಾರೆ. ಜೊತೆಗೆ ಮೈಸೂರು ಮಲ್ಲಿಗೆಯ ಕವಿತೆಯ ಭಾಷೆ, ವಸ್ತು, ಲಯಗಳ ಮೇಲೆ ಇಂಗ್ಲಿಷ್ ಗೀತೆಗಳ ಪ್ರಭಾವವನ್ನು ಗುರುತಿಸಬಹುದು ಎಂದು ಡಾ. ಹೆಚ್.ಎಸ್.ವಿ. ಗುರ್ತಿಸಿದ್ದಾರೆ.
ಕೆಎಸ್‌ನ,{"ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ"}, ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿಯಲ್ಲಿ ಜನಿಸಿದರು. ಮೈಸೂರಿನಲ್ಲಿ ಇಂಟರ್ ಮೀಡಿಯಟ್ ಹಾಗೂ ಬೆಂಗಳೂರಿನಲ್ಲಿ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ; (ಅಪೂರ್ಣ) ವ್ಯಾಸಂಗ ಮಾಡಿದರು ೧೯೩೭ರಲ್ಲಿ ಸರಕಾರಿ ಸೇವೆಗೆ ಸೇರಿ ೧೯೭೦ರಲ್ಲಿ ನಿವೃತ್ತರಾದರು. ಮೈಸೂರು ಮಲ್ಲಿಗೆಯ ಕವಿತೆಗಳನ್ನು ಭಾವಗೀತೆಗಳ ಮೂಲಕ ಹಾಡಿ ಜನಪ್ರಿಯ ಮಾಡಿದಂತೆ ಆ ಕೃತಿಯನ್ನು ಅಪಾರ ಸಂಖ್ಯೆಯ ಓದುಗರೂ ಕೊಂಡು ಓದಿರುವುದು ಹೆಗ್ಗಳಿಕೆ. ಕೆಲವು ವರ್ಷಗಳ ಹಿಂದೆ ಇದೇ ಹೆಸರಿನಿಂದ ಚಲನಚಿತ್ರವೂ ನಿರ್ಮಾಣವಾಗಿದೆ. ನಾನು ಬರೆದ ಕವಿತೆಗಳು ಪ್ರೇಮ ಕವಿತೆಗಳಲ್ಲ, ದಾಂಪತ್ಯ ಕವಿತೆಗಳೆಂದು ಕೆಎಸ್‌ನ ಹೇಳಿಕೊಂಡಿದ್ದಾರೆ. ಮೈಸೂರು ಮಲ್ಲಿಗೆಯಲ್ಲಿ ಬಹುತೇಕ ಕವಿತೆಗಳು ದಾಂಪತ್ಯ ಗೀತೆಗಳೇ ಆಗಿವೆ. ನವಿಲೂರು, ಹೊನ್ನೂರು ಮೊದಲಾದವು ಗ್ರಾಮ ಬದುಕಿನ ನೆಲೆಗಳು. ಮಣ್ಣಿನ ವಾಸನೆಯ ಅಪ್ಪಟ ಕವಿತೆಗಳನ್ನು ಕೆಎಸ್‌ನ ನೀಡಿದ್ದಾರೆ. ಐರಾವತ, ದೀಪದ ಮಲ್ಲಿ, ಉಂಗುರ, ಇರುವಂತಿಗೆ, ಶಿಲಾಲತೆ, ಮನೆಯಿಂದ ಮನೆಗೆ, ತೆರೆದ ಬಾಗಿಲು, ನವಪಲ್ಲವ ಮುಂತಾದ ಕವನಗಳು ಹೊರಬಂದಿವೆ. "ಮಲ್ಲಿಗೆಯ ಮಾಲೆ" ಸಮಗ್ರ ಕವಿತೆಯ ಸಂಕಲನ. ಸಮಗ್ರ ಸಂಕಲನ ಬಂದರೂ ಈಚೆಗೆ `ಸಂಜೆ ಹಾಡು' ಎಂಬ ಹೊಸ ಕಾವ್ಯ ಹೊರಬಂದಿದೆ.
ಕಾವ್ಯ ಇವರ ಪ್ರಮುಖ ಕೃಷಿ ಆದರೂ ಗದ್ಯದಲ್ಲೂ ಕೃಷಿ ಮಾಡಿದ್ದಾರೆ. ಮಾರಿಯಕಲ್ಲು, ಉಪವನ, ದಮಯಂತಿ ಪ್ರಮುಖ ಕೃತಿಗಳು. ಅಲ್ಲದೆ ಹಲವು ಅನುವಾದಿತ ಕೃತಿಗಳೂ ಬಂದಿವೆ. ಮೋಹನ ಮಾಲೆ, ನನ್ನ ಕನಸಿನ ಭಾರತ, ಪ್ರಪಂಚದ ಬಾಲ್ಯದಲ್ಲಿ, ಮೀಡಿಯಾ, ಸುಬ್ರಮಣ್ಯ ಭಾರತಿ, ಮಾಯಾಶಂಖ ಮತ್ತು ಇತರ ಕತೆಗಳು, ಅನುವಾದಿತ ಕೃತಿಗಳು.
ಬಳೇಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹನು
ನಮ್ಮುರು ಚೆಂದವೋ ನಿಮ್ಮೂರು ಚೆಂದವೋ
ಸಿರಿಗಿರಿಯ ನೀರಿನಲಿ ಬಿರಿದ ತಾವರೆಯಲ್ಲಿ