ಚಳ್ಳಕೆರೆ | |
ರಾಜ್ಯ - ಜಿಲ್ಲೆ |
ಕರ್ನಾಟಕ - ಚಿತ್ರದುರ್ಗ |
ನಿರ್ದೇಶಾಂಕಗಳು | |
ವಿಸ್ತಾರ - ಎತ್ತರ |
km² - 585 ಮೀ. |
ಸಮಯ ವಲಯ | IST (UTC+5:30) |
ಜನಸಂಖ್ಯೆ (2001) - ಸಾಂದ್ರತೆ |
49,065 - /ಚದರ ಕಿ.ಮಿ. |
ಕೋಡ್‍ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- 577 522 - +08195 - KA-16 |
ಚಳ್ಳಕೆರೆ ಚಿತ್ರದುರ್ಗ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಇಲ್ಲಿ ಕಡ್ಲೆಕಾಯಿ (ಶೇಂಗಾ) ಬೆಳೆಯನ್ನು ಜಾಸ್ತಿ ಬೆಳೆಯುತ್ತಾರೆ. ಇದನ್ನು ಕರ್ನಾಟಕದ ಮುಂಬಯಿ ಎಂದು ಕರೆಯುತ್ತಾರೆ. ಇಲ್ಲಿ ೭೦ಕ್ಕು ಹೆಚ್ಚು ಎಣ್ಣೆ ಮಿಲ್ಲುಗಳು ಕಾರ್ಯ ನಿರ್ವಹಿಸುತ್ತವೆ.ಚಳ್ಳಕೆರೆ ತಾಲೂಕಿನ ಮುಖ್ಯ ವಾಣಿಜ್ಯ ಬೆಳೆ ಕಡಲೆ ಕಾಯಿ. ಆದ್ದರಿ೦ದ ಇದನ್ನು ಆಯಿಲ್ ಸಿಟಿ ಅ೦ತ ಕರೆಯುತ್ತಾರೆ. ಛೊಟಾ ಬಾ೦ಬೆ ಅ೦ತಾನು ಕರೆಯುತ್ತಾರೆ.ಕರ್ನಾಟಕ ರಾಜ್ಯದಲ್ಲಿ ಅತಿ ಕಡಿಮೆ ಮಳೆ ಬೀಳುವ ಪ್ರದೇಶ. ಇಲ್ಲಿನ ಕುರುಬ ಜನಾ೦ಗದ ಜನರು ನೇಯುವ ಕ೦ಬಳಿಗೆ ರಾಜ್ಯಾದ೦ತ ಬೇಡಿಕೆ ಇದೆ. ಮಲೆನಾಡಿನ ಮಾರುಕಟ್ಟೆಗೆ ಕ೦ಬಳಿ ಇಲ್ಲಿ೦ದಾನೆ ರಫ್ತು ಆಗೊದು.ಹೆಗ್ಗೆರೆ ಇದು ಒಂದು ಚಳ್ಳಕೆರೆ ಮತ್ತು ಹಿರಿಯೂರು ಮುಖ್ಯ ರಸ್ತೆಯಲ್ಲಿ ಬರುವ ಪುಟ್ಟ ಹಳ್ಳಿ. ಚಳ್ಳಕೆರೆಯಿ೦ದ ೧೮ ಕಿ.ಮೀ ಮತ್ತು ಹಿರಿಯೂರಿ೦ದ ೨೨ ಕಿ.ಮೀ ದೂರ ಇದೆ.ಪ್ರಾಚೀನ ಕಾಲದ ಹಾಳು ಊರು ಇದೆ. ಇಲ್ಲಿ ಸಾಕಷ್ಟು ನಿಧಿಗಳು ಸಿಕ್ಕಿರುವ ಉದಾಹರಣೆಹಗಳು ಇವೆ.ಇಲ್ಲಿ ತು೦ಬ ಸಂಶೋಧನೆಗಳು ಸಹ ನಡೆದಿವೆ. ನಾಯಕನಹಟ್ಟಿ ಶ್ರೀ ತಿಪ್ಫೇಸ್ವಾಮಿ ದೇವಸ್ತಾನ ಬಹಳ ಪ್ರಸಿದ್ಡ.ಇಲ್ಲಿ ನಡೆಯುವ ವೀರಭದ್ರ ಸ್ವಾಮಿ ಜಾತ್ರೆ ಯು ಸುಪ್ರಸಿದ್ದ.ಚಳ್ಳಕೆರೆ ಯಲ್ಲಿ 3 ವರ್ಷ ಕೊಮ್ಮೆ ನಡೆಯುವ ಚಳ್ಳಕೇರಮ್ಮ ಜಾತ್ರೆ ಯು ಇಲ್ಲಿನ ಇತಿಹಾಸ,ಸಂಸ್ಕೃತಿ, ತೋರಿಸುತ್ತದೆ.ಚಳ್ಳಕೆರೆ ತಾಲೂಕಿನಲ್ಲಿ ನಡೆಯುವ ಗೌರಸಮುದ್ರ ಮಾರಮ್ಮ ನ ಜಾತ್ರೆ, ಕ್ಯಾತಪ್ಪನ ಪರಿಷೆ ತುಂಬ ವಿಶಿಷ್ಟ ವಾಗಿರುತ್ತವೆ.. ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಕ್ಷೇತ್ರ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಪುಣ್ಯಕ್ಷೇತ್ರವು ರಾಜ್ಯದ್ಯಾಂತ ಮನೆಮಾತಾಗಿರುವ ಮಹಾಕ್ಷೇತ್ರವಾಗಿದೆ. ಚಳ್ಳಕೆರೆ ನಗರದಿಂದ ಸುಮಾರು 16 ಕಿ.ಮೀ. ದೂರದಲ್ಲಿರುವ ಈ ಕ್ಷೇತ್ರವು ಐತಿಹಾಸಿಕ ಹಿನ್ನೆಲೆಯೂ ಹೊಂದಿದೆ. ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ:
ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಕಂದಾಯ ಹೋಬಳಿ ಕೇಂದ್ರಸ್ಥಳವಾಗಿದ್ದು, ಈ ಗ್ರಾಮದಲ್ಲಿ ಪ್ರತಿವರ್ಷ ಫಾಲ್ಗುಣ ಮಾಸ ಬಹುಳದ ಚಿತ್ತ ನಕ್ಷತ್ರದಂದು ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ರಥೋತ್ಸವವು ಕರ್ನಾಟಕ ರಾಜ್ಯದಲ್ಲಿ ನಡೆಯುವ ಅತ್ಯಂತ್ಯ ದೊಡ್ಡ ಜಾತ್ರೆಗಳಲ್ಲಿ ಒಂದು. ನಾಯಕನಹಟ್ಟಿ ಜಾತ್ರೆಯು ಹಿಂದೂ-ಮುಸಲ್ಮಾನರ ಭಾವೈಕ್ಯತೆಯ ದ್ಯೋತಕವಾಗಿದೆ. ಇಲ್ಲಿನ ಕೇಂದ್ರ ಶಕ್ತಿಯಾದ ಗುರು ತಿಪ್ಪೇರುದ್ರಸ್ವಾಮಿಯನ್ನು “ಶ್ರೀ ಗುರು ತಿಪ್ಪೇರುದ್ರಸ್ವಾಮಿ” ಎಂತಲೂ ಕರೆಯುತ್ತಾರೆ. ಹಿಂದೆ ಪಂಚಗಣಾಧೀಶ್ವರರೆಂದು ಹೇಳಲಾಗಿರುವ ಕೋಲುಶಾಂತೇಶ, ಕೆಂಪಯ್ಯ, ಚೆನ್ನಪ್ಪಯ್ಯ, ಚನ್ನಬಸವೇಶ್ವರ ಹಾಗೂ ತಿಪ್ಪೇಸ್ವಾಮಿಗಳು ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಜನಜಾಗೃತಿಯನ್ನು ಮೂಡಿಸಿದ್ದರು ಎನ್ನಲಾಗಿದೆ. ಈ ಐವರಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯವರು ನಿಜಗಲ್ಲು-ರಾಯದುರ್ಗ ಕಡೆಗಳಲ್ಲಿ ಸಂಚರಿಸುವ ಸಂಧರ್ಭದಲ್ಲಿ ಫಣಿಯಪ್ಪ ಎಂಬ ಭಕ್ತನ ವ್ಯಕ್ತಿತ್ವಕ್ಕೆ ಮಾರುಹೋಗಿ, ಅವರನ್ನು ತನ್ನೊಂದಿಗೆ ಕರೆತರುತ್ತಾರೆ. ಅಲ್ಲಿಯ ಹಳ್ಳಿಜನರ ಬಡತನದ ಬಗ್ಗೆ ಅರಿತ ಸ್ವಾಮಿಗಳು ಅಲ್ಲಲ್ಲಿ ಕೆಲವು ಕೆರೆಗಳನ್ನು ನಿರ್ಮಿಸುತ್ತಾರೆ. ಕೂಲಿಕಾರರಿಗೆ ದಿನದ ಕೂಲಿಯನ್ನು “ಮಾಡಿದಷ್ಟು ನೀಡು ಭಿಕ್ಷೆ” ಎಂಬ ಮಂತ್ರಶಕ್ತಿಯಿಂದ ಸೃಷ್ಟಿಸುತ್ತಿದ್ದರು ಎಂಬ ದಂತಕಥೆಯು ಇದೆ.ಪವಾಡ ಪುರುಷರಾಗಿದ್ದರೆಂದು ನಂಬಲಾದ ಶ್ರೀ ಗುರು ತಿಪ್ಪೇರುದ್ರಸ್ವಾಮಿಯವರು ಯಾವ ಸ್ಥಳದವರು? ಯಾವ ಜಾತಿಯವರು? ಎಂಬ ಬಗ್ಗೆ ಈಗಲೂ ವಿವಾದಗಳಿವೆ. ಇವರು ವೀರಶೈವರೆಂದು ಕೆಲವರು ನಂಬಿದ್ದಾರೆ. ಇವರು ಬೇಡ ಜನಾಂಗದವರು ಇದ್ದಿರಬಹುದೆಂದು ಕೆಲವರ ವಾದ. ಒಂದು ದಿನ ನಾಯಕನಹಟ್ಟಿಗೆ ಬಂದ ತಿಪ್ಪೇಸ್ವಾಮಿಯವರು ಅದೇ ಗ್ರಾಮದಲ್ಲಿದ್ದ ಮಾರಮ್ಮನ ಗುಡಿಗೆ ಹೋಗಿ ಒಂದೆರಡು ದಿನ ತಂಗಲು ಸ್ಥಳಾವಕಾಶ ನೀಡಲು ಮಾರಮ್ಮದೇವಿಯ ಅಪ್ಪಣೆ ಪಡೆದರೆಂದೂ, ಮಾರಮ್ಮ ಬದಲು ಹಳ್ಳಿಗಳಿಗೆ ತಿರುಗಾಡಿ ಬರಲು ಹೋದಾಗ ಗುಡಿಯ ತುಂಬಾ ತಿಪ್ಪೇಸ್ವಾಮಿಯವರ ಜೋಳಿಗೆ-ಬೆತ್ತಗಳು ಕಾಣಿಸಿಕೊಂಡು, ಇದನ್ನು ಕಂಡ ಮಾರಮ್ಮ ಗುಡಿಯನ್ನು ತಿಪ್ಪೇಸ್ವಾಮಿಯವರಿಗೆ ಬಿಟ್ಟುಕೊಟ್ಟು ವಡ್ನಹಳ್ಳಿಗೆ ಹೋಗಿ ನೆಲೆಸಿದಳೆಂದು ಇಲ್ಲಿನ ಜನರು ಕಥೆ ಹೇಳುವುದಿದೆ. ಈಗ ಅದೇ ಗುಡಿ “ಶ್ರೀ ಗುರು ತಿಪ್ಪೇಸ್ವಾಮಿಯ ಒಳಮಠ”. ಇಲ್ಲಿ ತಿಪ್ಪೇಸ್ವಾಮಿಯವರನ್ನು ಲಿಂಗರೂಪದಲ್ಲಿ ಪ್ರತಿಷ್ಟಾಪಿಸಿ ಆರಾಧಿಸಲಾಗುತ್ತಿದೆ.
ಹೊರಮಠ ಹಾಗೂ ಒಳಮಠ:
ನಾಯಕನಹಟ್ಟಿಯಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಗೆ ಸಂಭಂಧಿಸಿದ ಎರಡು ಆರಾಧನಾ ಸ್ಥಳಗಳಾಗಿದ್ದು, ಅವುಗಳನ್ನು ಹೊರಮಠ ಹಾಗೂ ಒಳಮಠ ಎಂದು ಹೆಸರಿಸಲಾಗಿದೆ. ಶ್ರೀ ತಿಪ್ಪೇಸ್ವಾಮಿಗಳು ಜೀವಿತಾವಧಿಯಲ್ಲಿ ವಾಸವಾಗಿದ್ದ ಸ್ಥಳವು ಊರೊಳಗಿದ್ದು, ಅದನ್ನು ಒಳಮಠವೆಂದು ಕರೆಯುತ್ತಾರೆ. ಜೀವಂತ ಸಮಾಧಿ ಹೊಂದಿದ್ದ ಸ್ಥಳವು ಊರಿಂದ ಹೊರಗಡೆ ಚಿಕ್ಕಕೆರೆ ಹತ್ತಿರ ಇದ್ದು, ಇದಕ್ಕೆ ಹೊರಮಠ ಎನ್ನುವರು. ಒಳಮಠದ ಗೋಪುರವು 50 ಅಡಿ ಎತ್ತರವಿದ್ದು, ಅತ್ಯಾಕರ್ಷಕವಾಗಿದೆ. ಒಳಮಠದ ಮುಂದೆ ಜಾತ್ರೆ ಸಂಧರ್ಭದಲ್ಲಿ ಬೃಹತ್ತಾದ ಅಗ್ನಿಕುಂಡದಲ್ಲಿ ಒಣಕೊಬ್ಬರಿಯ ಹೋಳುಗಳ ರಾಶಿಯನ್ನು ಸುಡುವುದು ರಾಜ್ಯದಲ್ಲಿಯೇ ವಿಶೇಷ ಆಚರಣೆಯಾಗಿದೆ. ಈ ಆಚರಣೆಯ ಹಿಂದೆ ವಿಶಿಷ್ಟ ಕತೆಯೇ ಇದೆ. ತಿಪ್ಪೇಸ್ವಾಮಿಯವರು ಮೊದಲಿಗೆ ರಾಯದುರ್ಗದಿಂದ ನಾಯಕನಹಟ್ಟಿಗೆ ಬರುವಾಗ ರಾತ್ರಿ ಕತ್ತಲೆ ಆವರಿಸಿದ್ದು, ಫಣಿಯಪ್ಪನು ಒಣಕೊಬ್ಬರಿಗಳನ್ನು ಕೋಲುಗಳಿಗೆ ಸಿಕ್ಕಿಸಿ ಬೆಂಕಿಯಿಂದ ಹೊತ್ತಿಸಿ, ಆ ಬೆಳಕಿನಲ್ಲಿ ತಿಪ್ಪೇಸ್ವಾಮಿಯವರನ್ನು ಹಟ್ಟಿಗೆ ಕರೆತಂದನಂತೆ. ಆ ಕಾರಣಕ್ಕೆ ಇಂದಿಗೂ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಭಕ್ತರು ಒಣಕೊಬ್ಬರಿ ಸುಡುವ ಸಂಪ್ರದಾಯ ರೂಢಿಯಲ್ಲಿದೆ. ಅದೇ ರೀತಿ ದುಂಡು ಮೆಣಸು ಎರಚುವ ಸಂಪ್ರದಾಯ ಇಲ್ಲಿ ಇರುತ್ತದೆ. ಹೊರಮಠವನ್ನು ಶ್ರೀ ತಿಪ್ಪೇರುದ್ರಸ್ವಾಮಿ ‘ಗದ್ದುಗೆ’ ಎಂದು, ಒಳಮಠವನ್ನು ಶ್ರೀ ತಿಪ್ಪೇಸ್ವಾಮಿಯ ‘ಮಠ’ವೆಂದು ಕರೆಯುತ್ತಾರೆ. ಒಳಮಠಕ್ಕೆ ಶೈವರು ಪೂಜಾಧಿಕಾರವನ್ನು ಹೊಂದಿದ್ದರೆ, ಒಳಮಠದಲ್ಲಿ ಪ್ರತಿ ಸೋಮವಾರ ಪೂಜೆ ನಡೆಯುವುದಕ್ಕೆ ಹೊರಮಠಕ್ಕೆ ಜೀವಕಳೆ ಬರಬೇಕು ವಾಡಿಕೆಯಿದೆ! ನಾಯಕನಹಟ್ಟಿ ಜಾತ್ರೆಗೆ ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಿಂದಷ್ಟೇ ಅಲ್ಲದೇ ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಿಂದಲೂ ಭಕ್ತಾದಿಗಳು ಸಾಗರೋಪಾದಿಯಲ್ಲಿ ಸೇರುತ್ತಾರೆ. ಸುತ್ತಲೂ ಹತ್ತಾರು ಸ್ಥಳಗಳಿಂದ ರಾಜ್ಯ ಸರ್ಕಾರದ ವಿಶೇಷ ಬಸ್ಸುಗಳ ಈ ಜಾತ್ರೆಗೆ ಹಗಲಿರುಳು ಸಂಚರಿಸುತ್ತವೆ.
ಚಳ್ಳಕೆರೆ ತಾಲೂಕಲ್ಲಿ ಕೇತೇದೇವರ ಜಾತ್ರೆ...
ಅಪ್ಪಟ ಜಾನಪದ ಶೈಲಿಯ ಜಾತ್ರೆ ಕೇತೇದೇವರ ಮುಳ್ಳಿನ ಜಾತ್ರೆಯು...ಕೇದಾರಲಿಂಗೇಶ್ವರನೂ....ಕಾರ್ತ್ಯಾಯನಿ ವ್ರತವೂ.... ಹಾಲುಕಲ್ಲಿನಲಿ ದೇಗುಲ ಕಟ್ಟಿ, ಆಕಾಶದೆತ್ತರ ಗೋಪುರ ನಿರ್ಮಿಸಿ, ಭಂಡಾರ ಕರಗಿಸುತ್ತಾ ಭಕ್ತಿ ಪ್ರದರ್ಶಿಸುವ ಆಧುನಿಕ ಕಾಲದಲ್ಲೂ ಪರಿಶಿಷ್ಟ ಜನಾಂಗವೊಂದು ಅಪ್ಪಟ ಜಾನಪದ ಶೈಲಿಯ ಜಾತ್ರೆಯನ್ನು ಎಲ್ಲಾ ಪ್ರಾಚೀನ ಸಂಪ್ರದಾಯಗಳನ್ನೂ ಉಳಿಸಿಕೊಂಡು ಮೂಲ ಸೊಗಸಿನೊಂದಿಗೆ ಆಚರಿಸುವ ಪರಿಪಾಠ ಇಂದಿಗೂ ಚಳ್ಳಕೆರೆ ತಾಲೂಕಲ್ಲಿ ಅಸ್ತಿತ್ವದಲ್ಲಿದೆ. ಚಳ್ಳಕೆರೆ ತಾಲೂಕಿನ ಪುರ್ಲಹಳ್ಳಿ ಗ್ರಾಮಕ್ಕೆ ೧ ಕಿ. ಮೀ. ದೂರವಿರುವ ವಸಲು ದಿಬ್ಬ ಎಂಬ ೭೦ ಎಕರೆ ಬಯಲು ಪ್ರದೇಶದಲ್ಲಿ ನಡೆಯುವ ಗೊಲ್ಲಜನಾಂಗದ ಆರಾಧ್ಯ ದೈವ ಕೇತೇದೇವರ ಜಾತ್ರಗೆ ಸುಮಾರು ೧ ಲಕ್ಷಕ್ಕೂ ಹೆಚ್ಚು ಜನ ಸಾಕ್ಷಿಯಾಗುತ್ತಾರೆ.ಮೂಲತಃ ತಾಲೂಕಿನ ಚನ್ನಮ್ಮನಾಗ್ತಿಹಳ್ಳಿ ಗ್ರಾಮದ ಕೇತೇದೇವರನ್ನು ಪುರ್ಲಹಳ್ಳಿ ಗ್ರಾಮದ ರಿ.ಸ.ನಂ. ೫೬,೫೭ ನೇ ಜಮೀನಿನಲ್ಲಿರುವ ವಸಲು ದಿಬ್ಬ ಎಂಬ ವಿಶಾಲ ಬಯಲು ಪ್ರದೇಶಕ್ಕೆ ತಂದು ವಿಶೇಷವಾದ ಮುಳ್ಳಿನ ದೇವಸ್ಥಾನ ನಿರ್ಮಿಸಿ ಪೂಜೆ ಸಲ್ಲಿಸುವುದು ಜಾತ್ರೆಯ ವಿಶೇಷ. ೧ ತಿಂಗಳ ಕಾಲ ನಿಯಮ-ನಿಷ್ಟೆಯಿಂದ ನಡೆಯುವ ಈ ಜಾತ್ರೆಯಲ್ಲಿ ಅಪ್ಪಿ ತಪ್ಪಿ ಕೂಡಾ ಈ ಜನ ಕಟ್ಟಳೆ ಮೀರುವುದಿಲ್ಲ. ೧೩ ಬುಡಕಟ್ಟುಗಳಿಗೆ ಸೇರಿದ ಈ ಗೊಲ್ಲ ಜನಾಂಗ ದೇವರಿಗೆ ಹುರುಳಿಯಿಂದ ಕೈತೊಳೆಸಿ ಪೂಜೆ ಆರಂಭಿಸಿದರೆಂದರೆ ತಿಂಗಳ ನಂತರ ಮತ್ತೆ ದೇವರಿಗೆ ಹುರುಳಿ ನೈವೇದ್ಯ ಮಾಡಿದ ನಂತರವೇ ಹುರುಳಿ ಸೇವನೆ. ಅಲ್ಲಿಯವರೆಗೂ ಸಂಪೂರ್ಣ ನಿಷಿಧ್ಧ. ಸುಮಾರು ೭೦ ಎಕರೆ ವಿಶಾಲವಾದ ಪ್ರದೇಶದಲ್ಲಿ ಆಂಧ್ರ ಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಸುಮಾರು ೬ ಸಾವಿರ ಹಳ್ಳಿಗಳಲ್ಲಿರುವ ಗೊಲ್ಲ ಜನಾಂಗದ ಭಕ್ತರು ಜಮಾವಣೆಗೊಂಡು ಕುಲ ದೈವ ಕೇತೇದೇವರಿಗೆ ಹಣ್ಣು ಕಾಯಿ ನೈವೇದ್ಯ ಮಾಡಿ ತಮ್ಮ ಹರೆಕೆ ತೀರಿಸಿ ಪುನೀತರಾಗಿ ನವಣೆ, ಹುರುಳಿ ತಿಂದು ವ್ರತ ಬಿಡುವುದು ಜಾತ್ರೆಯ ಮುಖ್ಯ ಭಾಗ. ಟಿ ಬಾರೆಕಳ್ಳೆಯ ಗುಡಿಯೇ ಇಲ್ಲಿ ಆಲಯ: ಗೊಲ್ಲ ಜನಾಂಗದ ೧೩ ಗುಡಿಕಟ್ಟಿನಲ್ಲಿ ಕೋಣನ ಗೌಡರು, ಬೊಮ್ಮನ ಗೌಡರು ಅಣ್ಣ ತಮ್ಮಂದಿರು ಸೇರಿಕೊಂಡು ೧ ತಿಂಗಳು ಮೊದಲೇ ಜಾತ್ರಗೆ ಸಿದ್ಧತೆ ಆರಂಭಿಸುತ್ತಾರೆ. ಹತ್ತಿ ಮರದ ಕಟ್ಟಿಗೆ ತಂದು ನೆಲಕ್ಕೆ ತಾಗಿಸದಂತೆ ಗುಡಿನಿರ್ಮಿಸುವ ವಸಲು ದಿಬ್ಬಕ್ಕೆ ತರುತ್ತಾರೆ. ಮೂಲ ದೇವಸ್ಥಾನದ ಸುತ್ತ ಕಳ್ಳೆ ಕಟ್ಟುವುದು, ಬಾರೆ ಕಳ್ಳೆ, ತುಗ್ಗಲಿ ಕಟ್ಟಿಗೆ ಕಡಿದು ವಸಲು ದಿಬ್ಬಕ್ಕೆ ತರುವುದು, ನಂತರ ಬಾರೆ ಮತ್ತು ತುಗ್ಗಲಿ ಕಟ್ಟಿಗೆಯಿಂದ ಗುಡಿ ಕಟ್ಟಿ ಕಳಶ ಪ್ರತಿಷ್ಟಾಪನೆ ಮಾಡುವುದು, ಬಂಜಗೆರೆ ಗ್ರಾಮದಿಂದ ವೀರಣ್ಣ ದೇವರನ್ನು, ಬತವಿನ ದೇವರನ್ನು (ವ್ರತದ ದೇವರು) ತರುವುದು, ಆಂಧ್ರದ ಐಗಾರ್‍ಲಹಳ್ಳಿ ಗ್ರಾಮದಿಂದ ತಾಳಿ ದೇವರು (ಎಲ್ಲಾ ಪೆಟ್ಟಿಗೆ ದೇವರು) ತಂದು, ಗುಡಿ ತುಂಬಿಸುವುದು. ಸುಮಾರು ೨೦ ಅಡಿ ಎತ್ತರಕ್ಕೆ ಮದ್ಯದಲ್ಲಿ ಒಂದು ಕಂಬ ನೆಟ್ಟು ಸುಮಾರು ೧೫ಅಡಿ ಸತ್ತಳತೆಯಲ್ಲಿ ಸುತ್ತ ತುಗ್ಗಲಿ ಕಟ್ಟಿಗೆ ಆಧಾರವಾಗಿ ಕಟ್ಟಿ ಅದರ ಮೇಲೆ ಬಾರೆ ಮುಳ್ಳಿನ ಕಳ್ಳೆ ಹೊದಿಸುತ್ತಾರೆ. ನಂತರ ೧೩ ಬುಡಕಟ್ಟಿನ ಗೌಡರು ೫ ಕಳಶಗಳನ್ನು ೨೦ ಅಡಿ ಎತ್ತರದಲ್ಲಿ ಪ್ರತಿಷ್ಟಾಪಿಸುತ್ತಾರೆ. ಜಾತ್ರಯ ದಿನ ೧೩ ಬುಡಕಟ್ಟಿನ ಪೂಜಾರರು ನೇಮಿಸಿದ ೫ ಈರಗಾರರನ್ನು ಕಳಶ ಕೀಳಲು ಕಳಿಸುತ್ತಾರೆ. ಬರಿ ಮೈಯಲ್ಲಿ, ಬರಿಗಾಲಲ್ಲಿ ಇಳಿಜಾರಾದ ಗುಡಿಯನ್ನು ರಭಸವಾಗಿ ಹತ್ತುವುದೇ ರೋಚಕ. ೫ ಜನರಲ್ಲಿ ಯಾರಾದರು ಕಳಸ ಕೀಳಲು ಅಸಮರ್ಥರಾದರೆ ಅವರಲ್ಲೇ ಯಾರಾದರು ಕಿತ್ತು ತರಬಹುದು. ಬೇರೆ ಯಾರೂ ಗುಡಿ ಹತ್ತುವಂತಿಲ್ಲ. ಇದು ಜಾತ್ರೆಯ ಅಂತಿಮ ಹಂತ. ಕಳಶ ಕೀಳುವುದಕ್ಕೆ ಮೊದಲು ಗಲಾಟೆಗಳಾಗುತ್ತಿದ್ದವು. ಯಾರು ಕೀಳಬೇಕೆಂಬ ವಿಚಾರದಲ್ಲಿ ಸಮಸ್ಯೆ ತಲೆದೋರಿ ವಿಚಾರ ನ್ಯಾಯಾಲಯದ ಮೆಟ್ಟಿಲು ಸಹ ಹತ್ತಿತ್ತು, ಗುಡಿಕಟ್ಟಿನ ಮಖಂಡರ ತೀರ್ಮಾನಕ್ಕೇ ಕೋರ್ಟ್ ಒಪ್ಪಿಸಿದ ನಂತರ ಜಾತ್ರೆ ಸಾಂಗವಾಗಿ ನಡೆಯುತ್ತಿದೆ ಎನ್ನುತ್ತಾರೆ ಜನಾಂಗದ ಮುಖಂಡರು.. ಟಿ ಏನಿದು ಕೇತೇದೇವರು: ಚನ್ನಮ್ಮನಾಗತಿಹಳ್ಳಿ ಕೇತೇದೇವರ ಪೂಜಾರಿ ಚಂದ್ರಣ್ಣ ಅವರ ಪ್ರಕಾರ ಕೇತೇದೇವರೆಂಬುದು ಕೇದಾರೇಶ್ವರನಾಗಿದ್ದು ಬುಡಕಟ್ಟು ಜನರ ಬಾಯಲ್ಲಿ ಕೇತೇದೇವರಾಗಿದ್ದಾನೆ. ಬಂಜಗೆರೆ ಈರಣ್ಣ ದೇವರು ಸಹ ಈಶ್ವರನೇ. ಕಳಸ ಕೀಳುವುದಕ್ಕೆ ಎರಡು ದಿನ ಮೊದಲು ಐದು ಪೆಟ್ಟಿಗೆ ದೇವರುಗಳನ್ನು ಸೆರೆಯಲ್ಲಿಡುತ್ತೇವೆ. (ಮರೆಮಾಚಿ ಇಡುವುದು.) ನಂತರ ಎಲ್ಲಾ ಪಂಚ ಪೀಠದ ದೇವರುಗಳನ್ನು ಪೂಜೆಗೆ ಸಜ್ಜುಗೊಳಿಸುತ್ತೇವೆ. ಪಂಚಪೀಠದ ದೇವರೆಂದರೆ ಕೇದಾರೇಶ್ವರ, ಬಾಳೆಹೊನ್ನೂರು, ಉಜ್ಜಿನಿ, ಶ್ರೀಶೈಲ, ಕಾಶಿ ಪೀಠದ ದೇವರುಗಳು. ಬತದ ದೇವರು ಎಂದರೆ ವ್ರತದ ದೇವರು. ಈ ಜಾತ್ರೆಯ ಒಟ್ಟು ಆರಾಧನೆ “ಕಾರ್ತ್ಯಾಯನಿ ವ್ರತ" ಎಂಬುದು ಚಂದ್ರಣ್ಣನವರ ವಿಶ್ಲೇಷಣೆ. ಒಂದು ತಿಂಗಳ ಕಾಲ ಈ ಜನಾಂಗ ಬೇರೆ ಕುಲಸ್ಥರ ಮನೆಗೆ ಹೋಗುವುದಿಲ್ಲ. ಬೇರೆಯವರನ್ನು ತಮ್ಮ ಮನೆಗೆ ಬಿಟ್ಟುಕೊಳ್ಳುವುದಿಲ್ಲ. ಹೊರಗಡೆ ಏನನ್ನೂ ತಿನ್ನುವುದಿಲ್ಲ. ಕಠೋರ ವ್ರತದಾರಿಗಳಿವರು. ಎಲ್ಲಾ ವಿಚಾರಗಳಲ್ಲೂ ರಾಜಿ ಮಾಡಿಕೊಂಡು ಕಾನೂನು ಕಟ್ಟಳೆಗಳನ್ನು ಗಾಳಿಗೆ ತೂರುವ ಇಂದಿನ ದಿನ ಮಾನದಲ್ಲಿ ಈ ಬುಡಕಟ್ಟು ಜನಾಂಗ ಇಂದಿಗೂ ಕಟ್ಟುನಿಟ್ಟಿನ ಜಾತ್ರೆ ಆಚರಿಸಿಕೊಂಡು ಬರುತ್ತಿರುವುದು ಮಾತ್ರ ಅನುಕರಣೀಯ.ಚಳ್ಳಕೆರೆ ತಾಲ್ಲೂಕಿನ ಮತ್ತೊಂದು ಪ್ರಮುಖ ಸ್ಥಳ ಗೌರ ಸಮುದ್ರ ಮಾರಮ್ಮನ ಜಾತ್ರೆ ಇದು ಸಹ ಬುಡಕಟ್ಟು ಸಂಸ್ಕೃತಿಯ ಪದ್ದತಿ ತಾಲ್ಲೂಕಿನ ಮುಖ್ಯವಾದ ನೀರಿನ ಮೂಲ ಎಂದರೆ ವೇದಾವತಿನದಿ ಈ ನದಿಯು ಹಿರಿಯೂರು ತಾಲ್ಲೂಕಿನ ಶಿಡ್ಲಯ್ಯನಕೋಟೆ ಗ್ರಾಮದ ಮು ಖೇನ ಚಳ್ಳಕೆರೆ ತಾಲೂಕಿನ ಸರಹದ್ದು ಪ್ರವೇಶಿಸಿ ತಾಲ್ಲೂಕಿನ ಬೆಳಗೆರೆ .ಪರುಶುರಾಂಪುರ.ಪಗಡಲಬಂಡೆ .ಜಾಜೂರು ರೇಣುಕಾ ಪುರ ಗ್ರಾಮಗಳ ಮುಖಾಂತರ ಆಂಧ್ರಪ್ರದೇಶದ ಬಿ.ಟಿ ಡ್ಯಾಮ್ ಗೆ ಸೇರುತ್ತದೆ ಪಗಡಲಬಂಡೆ ಗ್ರಾಮದಲ್ಲಿ ಮಾರಿಕಾಂಬಾ ದೇವಿಯ ಜಾತ್ರೆ ವಿಷೇಶವಾಗಿ ನಡೆಯುತ್ತದೆ ಪಗಡಲಬಂಡೆ ಗ್ರಾಮದಲ್ಲಿ ಪಾಳೇಗಾರರು ನಿರ್ಮಾಣದ ಕೋಟೆಯನ್ನು ಸಹ ನಾವು ನೋಡಬಹುದು ಸದರಿ ಕೋಟೆಯು ಪಗಡಲಬಂಡೆ ಬೆಟ್ಟದ ಮೇಲೆ ಕಟ್ಟಡದ ರೀತಿಯಲ್ಲಿ ಕಟ್ಟಲ್ಪಟ್ಟಿದೆ
www.challakere.webs.com