ಚಿರಂಜೀವಿ ಎಂದರೆ ಸಾವಿಲ್ಲದವನು ಎಂದು ಅರ್ಥ. ಹಿಂದೂ ಪುರಾಣಗಳ ಪ್ರಕಾರ ರಾಮಾಯಣ ಮತ್ತು ಮಹಾಭಾರತಗಳಿಗೆ ಸಂಬಂಧಿಸಿದ ಏಳು ಪೌರಾಣಿಕ ವ್ಯಕ್ತಿಗಳನ್ನು ಚಿರಂಜೀವಿಗಳು ಎಂದು ನಂಬಲಾಗಿದೆ. ಅವರು ಯಾರೆಂದರೆ -
ಅಶ್ವತ್ಥಾಮೋ ಬಲಿರ್ವ್ಯಾಸೋ ಹನೂಮಾಂಶ್ಚ ವಿಭೀಷಣಃ |
ಕೃಪಃ ಪರಶುರಾಮಶ್ಚ ಸಪ್ತೈತೇ ಚಿರಜೀವಿನಃ ||