ಡಿ.ವಿ.ಜಿ | |
---|---|
![]() ಮಧ್ಯ ವಯಸ್ಸಿನಲ್ಲಿ ಡಿವಿಜಿ | |
ಜನನ | ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ ೧೭ ಮಾರ್ಚ್ ೧೮೮೭ |
ಸಾವು | 7 October 1975 | (aged 88)
Other names | ಡಿ ವಿ ಜಿ,[ಕಾವ್ಯನಾಮ] |
ಶಿಕ್ಷಣ(s) | ತತ್ತ್ವಶಾಸ್ತ್ರ ವಿದ್ವಾಂಸ, ಲೇಖಕ, ಕವಿ, ಪತ್ರಕರ್ತ. |
Known for | ಮಂಕುತಿಮ್ಮನ ಕಗ್ಗ |
Spouse | ಭಾಗೀರಥಮ್ಮ [೧] |
ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.[೨][೩][೪]
ಡಿ.ವಿ.ಜಿ ಅವರು ೧೮೮೭, ಮಾರ್ಚ್ ೧೭ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು.
ಡಿ.ವಿ.ಜಿ ಅವರು ೧೮೮೭, ಮಾರ್ಚ್ ೧೭ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು. ಅವರ ಪೂರ್ವಿಕರು ತಮಿಳುನಾಡಿನ ತಿರುಚಿನಾಪಳ್ಳಿಯ ಕಡೆಯವರು. ಅವರ ಮುತ್ತಜ್ಜ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ವಲಸೆ ಬಂದವರು. ಶೇಕದಾರ ಕುಟುಂಬದ ಗುಂಡಪ್ಪನವರು ೧೮೯೮ ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸಾದರು. ಆ ಸಂದರ್ಭದಲ್ಲೇ ಸಿಕ್ಕ ಇಂಗ್ಲಿಷ್ ಶಿಕ್ಷಣವನ್ನು ಪಡೆದರು. ಖಾಸಗಿಯಾಗಿ ಸಂಸ್ಕೃತವನ್ನು ಅಭ್ಯಾಸ ಮಾಡಿದರು. ಮುಂದೆ ಸಂಬಂಧಿಕರೊಬ್ಬರ ಸಹಾಯದಿಂದ ಮೈಸೂರಿನ ಮಹಾರಾಜ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದರು. ಆದರೆ ೧೯೦೫ ರಲ್ಲಿ ಮೆಟ್ರಿಕ್ಯುಲೇಷನ್ ನಲ್ಲಿ ತೇರ್ಗಡೆಯಾಗಲಿಲ್ಲ. ಅಲ್ಲಿಗೆ ಶಾಲಾ ಶಿಕ್ಷಣವನ್ನು ನಿಲ್ಲಿಸಿದರು.
ಪ್ರೌಢಶಾಲೆಯಲ್ಲಿ ಓದುವಾಗಲೇ ಗುಂಡಪ್ಪನವರಿಗೆ ಮದುವೆಯಾಯಿತು. ಹೆಂಡತಿ ಭಾಗೀರಥಮ್ಮ. ಮುಂದೆ ಮುಳಬಾಗಿಲಿನ ಒಂದು ಶಾಲೆಯಲ್ಲಿ ಬದಲಿ ಅಧ್ಯಾಪಕರಾಗಿ ಕೆಲ ಕಾಲ ಕೆಲಸ ಮಾಡಿದರು. ಅದೇ ಅವರ ವೃತ್ತಿ ಜೀವನದ ನಾಂದಿ. ಆದರೂ ಅಲ್ಲಿರಲಾಗಲಿಲ್ಲ. ವೃತ್ತಿ ಬಿಟ್ಟು ಮುಂದೆ ಕೋಲಾರದ ಚಿನ್ನದ ಗಣಿಯಲ್ಲಿ, ಸೋಡಾ ಫ್ಯಾಕ್ಟರಿಯಲ್ಲಿ, ಕೆಲಸ ಮಾಡಿದರು. ನಂತರ ಬೆಂಗಳೂರಿಗೆ ಬಂದು ಕೆಲಸಕ್ಕಾಗಿ ಎಲ್ಲೆಂದರಲ್ಲಿ ಅಲೆದರು.
ದಿವಾನ್ ರಂಗಾಚಾರ್ಯ ಅವರ ಬಗ್ಗೆ ಇಂಗ್ಲಿಷಿನಲ್ಲಿ ಬರೆದ ಲೇಖನ ಡಿ.ವಿ.ಜಿ ಅವರ ಬದುಕಲ್ಲಿ ಹೊಸ ತಿರುವು ಪಡೆಯಿತು. ಮುಂದೆ ಪುಸ್ತಕ ರೂಪಕ್ಕೆ ತರಲು ಹಲವು ಮಾರ್ಪಾಡು ಮಾಡಿದರು. ಇದು ಪ್ರಕಟವಾಗುತ್ತಿದ್ದಂತೆ ಕೃತಿ ಪ್ರಕಟಣೆ ಮೂಲಕವೂ ಹಣ ಬರುವಂತಾಯಿತು.
ಸಾಹಿತ್ಯ ಮಾತ್ರವಲ್ಲದೆ ಚರಿತ್ರೆ, ರಾಜನೀತಿ, ತತ್ವಜ್ಞಾನ, ಪ್ರಜಾಪ್ರಭುತ್ವ, ಸಮಾಜ ವಿಜ್ಞಾನ, ಸಾರ್ವಜನಿಕ ಜೀವನ, ಮುಂತಾದ ಹಲವಾರು ವಿಷಯಗಳನ್ನು ಕುರಿತು ಅವರು 66 ಕನ್ನಡ ಕೃತಿಗಳನ್ನು ರಚಿಸಿರುವುದರ ಜೊತೆಗೆ, ಇಂಗ್ಲಿಷ್ – ಕನ್ನಡ ಭಾಷೆಗಳೆರಡರಲ್ಲಿಯೂ ನೂರಾರು ಉಪಯುಕ್ತ ಲೇಖನಗಳನ್ನೂ ಬರೆದಿರುತ್ತಾರೆ. ಇವರ ಇಂಗ್ಲಿಷ್ ಕೃತಿಗಳು ಹಾಗೂ ಲೇಖನಗಳನ್ನು ವಿಶ್ವವಿಖ್ಯಾತ ವಿದ್ವಾಂಸರಾದ ಡಾ. ಎ.ಬಿ. ಕೀತ್ ಹಾಗೂ ಸಿ.ಎಫ್. ಆಂಡ್ರ್ಯೂಸ್ ಮತ್ತು ನಮ್ಮ ದೇಶದ ಅಗ್ರಗಣ್ಯ ವ್ಯಕ್ತಿಗಳಾಗಿದ್ದ ಎಸ್.
ಜೀವನದಲ್ಲಿ ತೊಂದರೆಗಳಿದ್ದರೂ ಅವರಲ್ಲಿ ಹಾಸ್ಯ ಪ್ರವೃತ್ತಿಯೂ ಇತ್ತು. ಅವರು ವ್ಯಾಕರಣಕಲಿಯಲು ಗರಣಿಕೃಷ್ಣಾಚಾರ್ಯರಲ್ಲಿ ಹೋದಾಗ ಅವರಿಗೆ ಶಬ್ದಶಾಸ್ತ್ರ ಒಲಿಯದೆ ಸೂಪಶಾಸ್ತ್ರದಲ್ಲಿ ಪರಿಣತಿ ಪಡೆದುದಾಗಿ ಒಂದು ಹಾಸ್ಯ ಭರಿತ ಸಂಸ್ಕೃತ ಶ್ಲೋಕದಲ್ಲಿ ಹೇಳುತ್ತಾರೆ:
ನ ವೇದಾಂತೇ ಗಾಢಾ ನಚ ಪರಿಚಿತಂ ಶಬ್ದಶಾಸ್ತ್ರಂ|
ನ ವಾ ತರ್ಕೇ ವೇದೇ ನ ಚ ಸರಸತಾ ಕಾವ್ಯನಿಹವೇ|
ವಯಂ ಶ್ರೀಮದ್ಬ್ಯಾಳೀಹುಳಿ ಪಳದ್ಯ ಕೊಸುಂಂಬ್ರಿತೊವ್ವೀ|
ಹಯಗ್ರೀವಾಂಬೋಡೀ ಕರಿಗಡಬು ದಧ್ಯನ್ನ ರಸಿಕಾಃ||
ಅರ್ಥ: ನಾವು ವೇದಂತದಲ್ಲಿ ನುರಿತವರಲ್ಲ, ವ್ಯಾಕರಣವನ್ನೂ ಅರಿತವರಲ್ಲ, ತರ್ಕವೇದಗಳನ್ನೂ ತಿಳಿದವರಲ್ಲ, ಸಾಹಿತ್ಯದಲ್ಲಿ ಸರಸತೆಇಲ್ಲ, ಆದರೆ ಕೇವಲ ಶ್ರೀಮದ್ ಬೇಳೇಹುಳಿ,ಪಳದ್ಯ, ಕೋಸಂಬರಿ, ತೊವ್ವೆ,ಹಯಗ್ರೀವ, ಅಂಬೊಡೆ, ಕರಿಗಡಬು ಮತ್ತು ಮೊಸರನ್ನದಲ್ಲಿ ರಸಿಕರು.[೧೧]
೧೯೭೫ ರ ಅಕ್ಟೋಬರ್ ೭ ರಂದು ಡಿ ವಿ ಜಿ ನಿಧನರಾದರು.[೧೪][೧೫][೧೬]
{{cite book}}
: Unknown parameter |Author=
ignored (|author=
suggested) (help)