ತಾಳಗುಂದ | |
---|---|
ಹಳ್ಳಿ | |
Country | India |
State | Karnataka |
District | Shimoga District |
Languages | |
• Official | Kannada |
Time zone | UTC+5:30 (IST) |
PIN | 577 450 |
Telephone code | 08187 |
Vehicle registration | KA-14 |
ತಾಳಗುಂದ ಒಂದು ಚಿಕ್ಕ ಹಳ್ಳಿಯಾಗಿದ್ದು ಇದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿದೆ. ಹಿಂದೆ ಈ ಊರನ್ನು ಸ್ಥಾನಗುಂಡೂರು ಎಂದೂ ಕರೆಯಲಾಗುತ್ತಿತ್ತು ಎಂದು ಹೇಳುತ್ತಾರೆ. ತಾಳಗುಂದವು ಕನ್ನಡದ ಮೊದಲ ರಾಜವಂಶವಾದ ಕದಂಬರ ಕಾರಣದಿಂದ ಪ್ರಖ್ಯಾತಿಯನ್ನು ಹೊಂದಿದೆ.[೧]
ತಾಳಗುಂದ ಹಿಂದೆ ಒಂದು ಅಗ್ರಹಾರ ಆಗಿದ್ದುದಾಗಿ ತಿಳಿದು ಬರುತ್ತದೆ. ಅಂತಹ ಒಂದು ಅಗ್ರಹಾರದಲ್ಲಿಯೇ ಕನ್ನಡದ ಮೊದಲ ರಾಜವಂಶ ಎಂದು ಹೇಳಲ್ಪಡುವ ಕದಂಬ ವಂಶಸ್ಥನಾದ ಮಯೂರವರ್ಮನು ಬೆಳೆಯುತ್ತಾನೆ. ಹಾಗೆಯೇ ಕರ್ನಾಟಕದಲ್ಲಿ ದೊರೆತ ಮೊದಲ ಸಂಸ್ಕೃತ ಶಾಸನ ಇಲ್ಲಿಯೇ ಸಿಕ್ಕಿರುವುದು.
ನಾಲ್ಕನೇ ಶತಮಾನದಲ್ಲಿ ಕಟ್ಟಿದ ಪ್ರಣವೇಶ್ವರ ಮಂದಿರ ಇನ್ನೂ ಇಲ್ಲಿ ಇದೆ. ತಾಳಗುಂದ ಕಂಬ ಎಂದೇ ಹೆಸರುವಾಸಿಯಾದ ಕಲ್ಲಿನ ದೊಡ್ಡ ಕಂಬವೂ ಇಲ್ಲಿದೆ. ೧೬ ಶತಮಾನದ ಕೆಳದಿ ಚೆನ್ನಮ್ಮನ ಕಾಲದ ಶಾಸನವೂ ಇಲ್ಲಿ ಪತ್ತೆಯಾಗಿದೆ.[೨]
ಇಲ್ಲಿ ದೊರೆತಿರುವ ಕಲ್ಲಿನ ಶಾಸನವನ್ನು ಕನ್ನಡದ ಮೊತ್ತಮೊದಲ ಶಾಸನವೆಂದು ಭಾರತೀಯ ಪುರಾತತ್ವ ಇಲಾಖೆಯಿಂದ ಅಧಿಕೃತವಾಗಿ ಹೇಳಲಾಗಿದೆ.[೩]