ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ

ಕರ್ನಾಟಕದ ೨೩ನೆಯ ಮುಖ್ಯಮಂತ್ರಿ
ಅಧಿಕಾರ ಅವಧಿ
ಜುಲೈ ೨೮, ೨೦೨೧ – ಮೇ ೧೫,೨೦೨೩
ಪೂರ್ವಾಧಿಕಾರಿ ಬಿ.ಎಸ್. ಯಡಿಯೂರಪ್ಪ
ಉತ್ತರಾಧಿಕಾರಿ ಸಿದ್ದರಾಮಯ್ಯ
ಮತಕ್ಷೇತ್ರ ಶಿಗ್ಗಾಂವ
ವೈಯಕ್ತಿಕ ಮಾಹಿತಿ
ಜನನ (1960-01-28) ೨೮ ಜನವರಿ ೧೯೬೦ (ವಯಸ್ಸು ೬೪)
ಹುಬ್ಬಳ್ಳಿ
ರಾಜಕೀಯ ಪಕ್ಷ ಬಿಜೆಪಿ
ಸಂಗಾತಿ(ಗಳು) ಚೆನ್ನಮ್ಮ
ಧರ್ಮ ಹಿಂದು
ಜಾಲತಾಣ http://www.bsbommai.com/

ಬಸವರಾಜ ಬೊಮ್ಮಾಯಿ ಕರ್ನಾಟಕದ ಒಬ್ಬರು ರಾಜಕಾರಣಿ. ಭಾರತೀಯ ಜನತಾ ಪಕ್ಷದಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದಾರೆ. ಜುಲೈ೨೮, ೨೦೨೧ ರಂದು ಬಿ.ಎಸ್. ಯಡಿಯೂರಪ್ಪರವರ ನಂತರ ಬೊಮ್ಮಾಯಿ ಕರ್ನಾಟಕದ ೨೩ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.[]

ಬದುಕು

[ಬದಲಾಯಿಸಿ]

ಬಸವರಾಜ ಸೋಮಪ್ಪ ಬೊಮ್ಮಾಯಿ ಕರ್ನಾಟಕದ ಮಾಜಿ ಸಿಎಂ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್. ಆರ್. ಬೊಮ್ಮಾಯಿ-ಗಂಗಮ್ಮ ಅವರ ಪುತ್ರ. ೧೯೬೦ ರ ಜ.೨೮ ರಂದು ಜನಿಸಿದ ಬೊಮ್ಮಾಯಿ ಬಿ.ವಿ ಬೊಮ್ಮರೆಡ್ಡಿ ಕಾಲೇಜ್ ಆಫ್ ಇಂಜಿನಿಯರಿಂಗ್ ನಿಂದ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದ ಬೊಮ್ಮಾಯಿ ಮೂಲತಃ ವೃತ್ತಿಯಲ್ಲಿ ಕೃಷಿಕ ಮತ್ತು ಕೈಗಾರಿಕೋದ್ಯಮಿ.

ನೀರಾವರಿ ಯೋಜನೆಗಳಲ್ಲಿ ಹಾಗೂ ನೀರಾವರಿ ವಿಷಯಗಳಲ್ಲಿ ಆಳವಾದ ಜ್ಞಾನ ಹೊಂದಿರುವ ಅವರು, ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ಭಾರತದಲ್ಲೇ ಮೊದಲ ಶೇ.೧೦೦ ರಷ್ಟು ಕೊಳವೆ ನೀರಾವರಿ ಯೋಜನೆಯನ್ನು ಜಾರಿಗೆ ತರುವುದು ಸೇರಿದಂತೆ ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದು ಜಲಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ರಾಜಕೀಯ

[ಬದಲಾಯಿಸಿ]
  • ಅವರು ಜನತಾದಳದಿಂದ ತಮ್ಮ ರಾಜಕೀಯವನ್ನು ಪ್ರಾರಂಭಿಸಿದರು.
  • ೧೯೯೮ ಹಾಗೂ ೨೦೦೪ರಲ್ಲಿ ಧಾರವಾಡ ಸ್ಥಳೀಯ ಅಧಿಕಾರಿಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದರು.
  • ೨೦೦೮ರಲ್ಲಿ ಜನತಾದಳವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.
  • ೨೦೦೮ರ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಬೊಮ್ಮಾಯಿ ಆಯ್ಕೆಗೊಂಡಿದ್ದರು. ಬೊಮ್ಮಾಯಿ ಅವರು ಈ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
  • ಜೆ. ಹೆಚ್. ಪಟೇಲ್ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಕಾನೂನು ಮತ್ತು ಸಂಸದೀಯ ಸಚಿವರಾಗಿ, ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿರುವ ಅನುಭವವನ್ನು ಬಸವರಾಜ ಬೊಮ್ಮಾಯಿ ಹೊಂದಿದ್ದಾರೆ.
  • ಯಡಿಯೂರಪ್ಪ ಅವರ ಸಂಪುಟದಲ್ಲಿ ಗೃಹ ಖಾತೆಯನ್ನು ನಿರ್ವಹಿಸಿ ಅನುಭವ ಹೊಂದಿರುವ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೇರಿದರು.
  • ಜನತಾದಳದಿಂದ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್ ಆರ್ ಬೊಮ್ಮಾಯಿ) ಅವರು ಮುಖ್ಯಮಂತ್ರಿಯಾಗಿದ್ದ (೧೯೮೮-೮೯) ೩೨-೩೩ ವರ್ಷಗಳ ನಂತರ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯಿಂದ ಮುಖ್ಯಮಂತ್ರಿಯಾಗಿದ್ದಾರೆ.

ಉಲ್ಲೇಖಗಳು

[ಬದಲಾಯಿಸಿ]